Arvind Limbavali

ಮಹದೇವಪುರ ಕ್ಷೇತ್ರದ ಜನತೆಯ ಮನೆ-ಮನಗಳನ್ನು ಪ್ರವೇಶಿಸಿ ಮುಕ್ತವಾಗಿ ಮಾತನಾಡುವ, ಜನರೊಂದಿಗೇ ಬೆರೆತು ಕಷ್ಟ – ಸುಖಗಳನ್ನು ಅರಿಯುವ ಸ್ವಭಾವ ಅರವಿಂದ ಲಿಂಬಾವಳಿಯವರಿಗೆ ವಿದ್ಯಾರ್ಥಿ ದೆಸೆಯಿಂದಲೂ ಬಂದಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿದ್ಯಾರ್ಥಿ ಆಂದೋಳನಗಳ ಮೂಲಕವೇ ಅರವಿಂದ ಲಿಂಬಾವಳಿ ಬೆಳೆದಿದ್ದಾರೆ. ಎಪ್ಪತ್ತರ ದಶಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಹಾಗೂ ಎಂಬತ್ತರ ದಶಕದ ಆರಂಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ಅಭಾವಿಪ) ಕಾರ್ಯಕರ್ತರಾಗಿ ಸಾಮಾಜಿಕ ಜೀವನ ಆರಂಭಿಸಿದ ಅರವಿಂದ ಲಿಂಬಾವಳಿಯವರು ೧೯೮೬ರಿಂದ ಆರು ವರ್ಷಗಳ ಕಾಲ ಅಭಾವಿಪ ರಾಜ್ಯ ಸಹಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದರು.